ದಾವಣಗೆರೆ: ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಫೆಬ್ರವರಿ 8 ಮತ್ತು 9 ರಂದು ನಡೆಯಬೇಕಿದ್ದ 4ನೇ ಮಹರ್ಷಿ ವಾಲ್ಮೀಕಿ ಜಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಶ್ರೀ ಪ್ರಸನ್ನಾನಂದ ಸ್ವಾಮೀಜಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹರಿಹರ ತಾಲೂಕಿನ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ 8, 9 ರಂದು ನಿಗದಿಯಾಗಿದ್ದ ವಾಲ್ಮೀಕಿ ಜಾತ್ರೆಯನ್ನು ಕೊರೋನಾ ಕಾರಣದಿಂದ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಶೇಕಡ 7.5 ರಷ್ಟು ಮೀಸಲಾತಿ ಸೇರಿ, ಸಮಾಜದ ಬೇಡಿಕೆಗಳ ಕುರಿತಾಗಿ ಫೆಬ್ರವರಿ 9 ರಂದು ಸಭೆ ನಡೆಸಲಿದ್ದು, ಈ ಸಭೆಯಲ್ಲಿ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಶ್ರೀಗಳು ತಿಳಿಸಿದ್ದಾರೆ.