ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8, 9 ರಂದು ವಾಲ್ಮೀಕಿ ಜಾತ್ರೆ ನಡೆಯಲಿದೆ ಎಂದು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದ್ದಾರೆ.
ಗುರುಪೀಠದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಸಾನಿಧ್ಯ ವಹಿಸಿ ಮಾತನಾಡಿದ ಸ್ವಾಮೀಜಿ, ಜಾತ್ರೆ ಒಂದು ಧಾರ್ಮಿಕ ಪರಂಪರೆಯಾಗಿದ್ದರೂ ಸಮಾಜದ ಜನರನ್ನು ಒಟ್ಟುಗೂಡಿಸಲು, ಸಮಾಲೋಚನೆ ನಡೆಸಲು ಉತ್ತಮ ಅವಕಾಶವಾಗಿದೆ ಎಂದು ಹೇಳಿದ್ದಾರೆ.
ಸಮಾಜದ 15 ಜನ ಶಾಸಕರಿದ್ದು, ಎಲ್ಲರ ಸಹಕಾರ ಪಡೆದುಕೊಂಡು ವಾಲ್ಮೀಕಿ ಜಾತ್ರೆ ನಡೆಸಲಾಗುವುದು. ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.