ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿನ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ ನೋಟ್ ನಲ್ಲಿ ಮೂವರು ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದರು. ಇದೀಗ ಮೂವರಲ್ಲಿ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.
ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅಮಾನತುಗೊಂಡವರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣ ನಡೆದಿರುವ ಆರೋಪ ಕೇಳಿಬಂದಿದ್ದು, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿದೆ.