ಬೆಂಗಳೂರು: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಬಿಐ ಎಂಟ್ರಿಯಾಗಿದೆ. ಪ್ರಕರಣದ ಬಗ್ಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬಿಐಗೆ ದೂರು ನೀಡಿದೆ.
ಹಣ ವರ್ಗಾವಣೆ ವಂಚನೆ ಬಗ್ಗೆ ಬ್ಯಾಂಕ್ ಗಮನಕ್ಕೆ ಬಂದಿದ್ದು, ಅಕ್ರಮದ ಬಗ್ಗೆ ಸಿಬಿಐಗೆ ಔಪಚಾರಿಕ ದೂರು ನೀಡಲಾಗಿದೆ. ಯೂನಿಯನ್ ಬ್ಯಾಂಕ್ ನ ಎಂ.ಜಿ.ರಸ್ತೆ ಶಾಖೆಯಲ್ಲಿನ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಬ್ಯಾಂಕ್ ತಿಳಿಸಿದೆ.
ಸಿಬಿಐ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ನ್ಯಾಯಯುತವಾಗಿ ಸಮಸ್ಯೆ ಪರಿಹರಿಸಲು ಸಹಕರಿಸುವುದಾಗಿ ಯೂನಿಯನ್ ಬ್ಯಾಂಕ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ವಹಿಸುವ ಸಾಧ್ಯತೆ ಇದೆ.