ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ.
ವಾಲ್ಮೀಕಿ ನಿಗಮ ಹಗರಣ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆ, ಹೋರಾಟಕ್ಕೆ ಮುಂದಾಗಿರುವ ಬಿಜೆಪಿ, ಉತ್ತರ ಕರ್ನಾಟಕ ಭಾಗದಲ್ಲಿ ಪ್ರತಿಭಟನೆಗೆ ಸಜ್ಜಾಗಿದೆ. ಈ ನಿಟ್ಟಿನಲ್ಲಿ ವಾಲ್ಮೀಕಿ ನಿಗಮದಲ್ಲಿನ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಕೋರಿ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಅಣ್ಣಾಸಾಹೇಬ ಜೊಲ್ಲೆ, ರಮೇಶ್ ಜಾರಕಿಹೊಳಿ, ಬಿ.ಪಿ.ಹರೀಶ್ ಮೊದಲಾದವರ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.