ಮೈಸೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಲೆದಂಡವಾಗುವುದು ಖಚಿತ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಮೈಸೂರುನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಮುಡಾ ಹಗರಣ ವಿಚಾರ ಕೋರ್ಟ್ ನಲ್ಲಿದೆ. ಆ ಕೇಸ್ ಏನೇ ಆಗಲಿ ಅದು ಬೇರೆ ವಿಚಾರ. ಆದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಲೆದಂಡ ನಿಶ್ಚಿತ ಎಂದರು.
ಆರ್ಥಿಕ ಹಗರಣವಾದಾಗ ಅದಕ್ಕೆ ಆರ್ಥಿಕ ಸಚಿವರೇ ಹೊಣೆಗಾರರು. ಸಿಎಂ ಅವರೇ 88 ಕೋಟಿ ರೂಪಾಯಿ ಅವ್ಯವಹಾರ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ. ವಾಲ್ಮೀಕಿ ನಿಗಮದ ಹಣದಲ್ಲಿ ಬಳ್ಳಾರಿ ಲೋಕಸಭಾ ಚುನಾವಣೆ ನಡೆಸಲಾಗಿದೆ. ಈ ಹಣ ಮದ್ಯ ಖರೀದಿಗೆ ಬಳಸಿರುವುದು ಸಾಬೀತಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಿಶ್ಚಿತ ಎಂದು ಹೇಳಿದರು.