ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಪ್ರಕರಣ ಸಂಬಂಧ 12 ಆರೋಪಿಗಳ ವಿರುದ್ಧ 3000 ಪುಟಗಳ ಚಾರ್ಜ್ ಶೀಟ್ ನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಆದರೆ ಚಾರ್ಜ್ ಶೀಟ್ ನಲ್ಲಿ ಆರೋಪಿಗಳಾದ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹೆಸರಿಲ್ಲ ಎಂದು ತಿಳಿದುಬಂದಿದೆ.
ವಾಲ್ಮೀಕಿ ನಿಗದಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರ ಹೆಸರು ಚಾರ್ಜ್ ಶೀಟ್ ನಲ್ಲಿಲ್ಲ. ಅಲ್ಲದೇ ಶಾಸಕ ಬಸನಗೌಡ ದದ್ದಲ್ ಹೆಸರೂ ಕೂಡ ಇಲ್ಲ ಎಂದು ತಿಳಿದುಬಂದಿದ್ದು, ಚಾರ್ಜ್ ಶೀಟ್ ಅಚ್ಚರಿಗೆ ಕಾರಣವಾಗಿದೆ.
ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು 3000 ಪುಟಗಳ ಚಾರ್ಜ್ ಶೀಟ್ ನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಹಣ, ಕಾರು, ಚಿನ್ನ ಸೇರಿದಂತೆ 50 ಕೋಟಿ ರೂಪಾಯಿ ಆಸ್ತಿ ಜಪ್ತಿ ಮಾಡಲಾಗಿದೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.