alex Certify BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಜೂನ್ 28ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದ್ದು, ಅಕ್ರಮವಾಗಿ ಹಣ ವರ್ಗಾವಣೆ ಮಡಲಾಗಿದೆ. ಹಗರಣವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ.

ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿ.ಶ್ರೀರಾಮುಲು, ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್ ಸಿ, ಎಸ್ ಟಿಗಳಿಗೆ ಅನ್ಯಾಯ ಮಾಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ಕಳೆದ ವರ್ಷ 11 ಸಾವಿರ ಕೋಟಿ ಬಳಸಿದ್ದು, ಈ ವರ್ಷ 14 ಸಾವಿರ ಕೋಟಿ ಹಣ ದುರ್ಬಳಕೆ ಮಾಡಿದೆ. ಎಸ್ ಸಿ, ಎಸ್ ಟಿಗಳಿಗೆ ಮೀಸಲಿಟ್ಟ 25, ಸಾವಿರ ಕೋಟಿ ದುರ್ಬಳಕೆಯಾಗಿದೆ ಎಂದು ಆರೋಪಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...