ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಪ್ರತ್ಯೇಕ ತನಿಖೆ ಆರಂಭಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದ್ದು, ಈಗಾಗಲೆ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಿದೆ. ಜೈಲಿನಲ್ಲಿರುವ ಆರೋಪಿಗಳಾದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ್ ಹಾಗೂ ಪರಶುರಾಮ್ ಅವರ ವಿಚಾರಣೆ ನಡೆಸಿ, ಹೇಳಿಕೆ ದಾಖಲಿಸಿಕೊಂಡಿದೆ.
ಇನ್ನೊಂದೆಡೆ ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಸಿಬಿಐ ಕೂಡ ತನ್ನದೇ ಆಯಾಮದಲ್ಲಿ ತನಿಖೆ ನಡೆಸುತ್ತಿದೆ.
ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೆ ಎಸ್ ಐಟಿ 9 ಆರೋಪಿಗಳನ್ನು ಬಂಧಿಸಿದೆ. ಒಟ್ಟು 94 ಕೋಟಿ 73 ಲಕ್ಷ ಅವ್ಯವಹಾರ ನಡೆದಿದ್ದು, ಈ ಪೈಕಿ ಎಸ್ ಐಟಿ ಅಧಿಕಾರಿಗಳು 14.5 ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.