ಬೆಂಗಳೂರು: ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು ಎಸ್ಐಟಿ ಬಂಧಿಸಿದೆ.
ಸತ್ಯನಾರಾಯಣ ವರ್ಮ ಬಂಧಿತ ಆರೋಪಿ. ಹೈದರಾಬಾದ್ ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಈತ ವಿವಿಧ ಕಂಪನಿಗಳ ಹೆಸರಲ್ಲಿ 18 ಬ್ಯಾಂಕ್ ಖಾತೆ ತೆರೆದಿದ್ದ. ಎಲ್ಲಾ ಖಾತೆಗಳಿಗೂ ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಮಾಡಿದ್ದ. ಅಕೌಂಟ್ ನಂಬರ್ ಪರಿಶೀಲನೆ ವೇಳೆ ನಕಲಿ ಖಾತೆ ತೆರೆದಿರುವುದು ಬೆಳಕಿಗೆ ಬಂದಿದೆ.
ಬಂಧಿತ ಸತ್ಯನಾರಾಯಣ ಬಳಿಯಿಂದ 16 ಕೆಜಿ ಚಿನ್ನ, 10 ಕೋಟಿ ರೂಪಾಯಿ ನಗದು ಜಪ್ತಿ ಮಾಡಲಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ಹಣ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಎಂ.ಜಿ.ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ ಈ ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿತ್ತು.