
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಬಂಧಿಸಿದಂತೆ ಜೈಲು ಪಾಲಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ಬೆಂಗಳೂರಿನ 82ನೇ ಸಿಟಿ ಸಿವಿಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಚಿವ ನಾಗೇಂದ್ರ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ, ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಅವರನ್ನು ಮೂರು ತಿಂಗಳ ಹಿಂದೆ ಜಾರಿ ನಿರ್ದೇಶನಾಯಲ-ಇಡಿ ಅಧಿಕಾರಿಗಳು ಬಂಧಿಸಿದ್ದರು. ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಾಗೇಂದ್ರ ಅವರಿಗೆ ಇದೀಗ ಜನಪ್ರತಿನಿಧಿಗಳ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.