ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಮಾಜಿ ಸಚಿವ ನಾಗೇಂದ್ರ ಅವರನ್ನು ಕಸ್ಟಡಿಗೆ ಪಡೆದಿತ್ತು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ಈ ವೇಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಬಿ.ನಾಗೇಂದ್ರ ಅವರನ್ನು ಆಗಸ್ಟ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ನಾಗೇಂದ್ರ ಪರಪ್ಪನ ಅಗ್ರಹಾರ ಜೈಲು ಪಾಲಾಗಲಿದ್ದಾರೆ.