
ಬೆಳಗಾವಿ: 2023ರ ಡಿಸೆಂಬರ್ 10ರಂದು ವಂಟಮೂರಿಯಲ್ಲಿ ನಡೆದಿದ್ದ ಅಮಾನವೀಯ ಘಟನೆ ಇಡೀ ರಾಜ್ಯವೇ ತಲೆತಗ್ಗಿಸುವಂತೆ ಮಾಡಿತ್ತು. ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದ ಪ್ರಕರಣದ ಎಲ್ಲಾ ಆರೋಪಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಘಟನೆ ನಡೆದ 4 ತಿಂಗಳ ಬಳಿಕ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಬೆಳಗಾವಿಯ ಹಿಂಡಲಗಾ ಜೈಲಿನಿಂದ ಹೊರ ಬಂದಿದ್ದಾರೆ. ಆರೋಪಿಗಳು ಜೈಲಿನಿಂದ ಹೊರಬರುತ್ತಿದ್ದಂತೆ ಬೆಂಬಲಿಗರು ಆರೋಪಿಗಳಿಗೆ ಹೂವಿನ ಹಾರಹಾಕಿ, ಸಿಹಿ ತಿನ್ನಿಸಿ ಸ್ವಾಗತಿಸಿದ್ದಾರೆ.
ಪ್ರೀತಿ-ಪ್ರೇಮದ ವಿಚಾರವಾಗಿ ಸಂತ್ರಸ್ತ ಮಹಿಳೆಯ ಮಗ, ಯುವತಿಯೊಂದಿಗೆ ಓಡಿ ಹೋಗಿದ್ದಾನೆ ಎಂದು ಯುವತಿಯ ಮನೆಯವರು ಯುವಕನ ಮನೆಗೆ ಬಂದು ಗಲಾಟೆ ಮಾಡಿ ಯುವಕನ ತಾಯಿಯನ್ನು ಕರೆಂಟ್ ಕಂಬಕ್ಕೆ ಕಟ್ಟಿ ಥಳಿಸಿದ್ದರು.
ಪ್ರಕರಣ ಸಂಬಂಧ ಕಾಕತಿ ಪೊಲೀಸರು 13 ಆರೋಪಿಗಳನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದರು. ಆದರೆ ಈಗ ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದಾರೆ.