alex Certify BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಟ್ಟಿಹಾಕಿ ಹಲ್ಲೆ ಪ್ರಕರಣ; ಬೆಳಗಾವಿಗೆ ಸಿಐಡಿ, ಮಾನವ ಹಕ್ಕುಗಳ ಆಯೋಗ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಟ್ಟಿಹಾಕಿ ಹಲ್ಲೆ ಪ್ರಕರಣ; ಬೆಳಗಾವಿಗೆ ಸಿಐಡಿ, ಮಾನವ ಹಕ್ಕುಗಳ ಆಯೋಗ ಭೇಟಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಡಿಐಜಿ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದ ತಂಡ ಬೆಳಗಾವಿಗೆ ಭೇಟಿ ನೀಡಿದೆ.

ಸಿಐಡಿ ಡಿಐಜಿ ಸುಧೀರ್ ಕುಮಾರ್, ಎಸ್ ಪಿ ಪೃಥ್ವಿಕ್, ರಶ್ಮಿ ಪರೆಡ್ಡಿ ಹಾಗೂ ಡಿವೈಎಸ್ ಪಿ ಅಂಜುಮಳ ನಾಯಕ್ ಸೇರಿದಂತೆ 6 ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿದ್ದು, ಸಂತ್ರಸ್ತೆ ದಾಖಲಾಗಿರುವ ಭಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಕುಟುಂಬದವರಿಂದ ಮಾಹಿತಿ ಸಂಗ್ರಹಿಸಿದ್ದಾರೆ.

ಈ ನಡುವೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಡಿಐಜಿ ಸುನೀಲ್ಕ್ ಕುಮಾರ್ ಮೀನಾ ಕೂಡ ಸಂತ್ರಸ್ತೆ ಹಾಗೂ ಕುಟುಂಬದವರನ್ನು ಭೇಟಿಯಾಗಿ ಮಾಹಿತಿ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...