ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ರೂಪದ ಆಕೃತಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಾರಣಾಸಿ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ. ಮಸೀದಿಯಲ್ಲಿರುವ ಶಿವಲಿಂಗದ ಆರಾಧನೆಗೆ ಅವಕಾಶ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಮೂರು ಬೇಡಿಕೆಗಳ ವಿಚಾರದ ಕುರಿತಾಗಿ ಕೋರ್ಟ್ ತೀರ್ಪು ನೀಡಲಿದೆ.
ವಾರಣಾಸಿಯ ತ್ವರಿತ ನ್ಯಾಯಾಲಯವು ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದಿರುವ ‘ಶಿವಲಿಂಗ’ ವನ್ನು ಪೂಜಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಇಂದು ನೀಡಲಿದೆ.
ಸ್ವಯಂಭೂ ಜ್ಯೋತಿರ್ಲಿಂಗ ಭಗವಾನ್ ವಿಶ್ವೇಶ್ವರನ ಪ್ರಾರ್ಥನೆಗೆ ತಕ್ಷಣದ ಅನುಮತಿ, ಸಂಪೂರ್ಣ ಜ್ಞಾನವಾಪಿ ಸಂಕೀರ್ಣವನ್ನು ಹಿಂದೂಗಳಿಗೆ ಹಸ್ತಾಂತರಿಸುವುದು ಸೇರಿದಂತೆ ಫಿರ್ಯಾದಿದಾರರ ಮೂರು ಪ್ರಮುಖ ಬೇಡಿಕೆಗಳ ಕುರಿತು ಸಿವಿಲ್ ನ್ಯಾಯಾಧೀಶ ಹಿರಿಯ ವಿಭಾಗ ತ್ವರಿತ ನ್ಯಾಯಾಲಯವು ತನ್ನ ತೀರ್ಪು ನೀಡಲಿದೆ.
ಅಕ್ಟೋಬರ್‌ನಲ್ಲಿ ನಡೆದ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, ವಾರಣಾಸಿ ನ್ಯಾಯಾಲಯವು ‘ಶಿವಲಿಂಗ’ದ ‘ವೈಜ್ಞಾನಿಕ ತನಿಖೆ’ಗೆ ಅನುಮತಿ ನೀಡಲು ನಿರಾಕರಿಸಿತ್ತು.