ಬೆಂಗಳೂರು: ಅಪಾರ್ಟ್ ಮೆಂಟ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಾಲಕಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಾರ್ಟ್ ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಸೇರಿ 7 ಜನರನ್ನು ಬೆಂಗಳೂರಿನ ವರ್ತೂರು ಪೊಲೀಸರು ಬಂಧಿಸಿದ್ದಾರೆ.
ಬಾಲಕಿ ತಂದೆ ರಾಜೇಶ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಬಾಲಕಿ ಸಾವನ್ನಪ್ಪಿದ ಒಂದು ತಿಂಗಳ ಬಳಿಕ 7 ಆರೋಪಿಗಳನ್ನು ವರ್ತೂರು ಪೊಲೀಸರು ಬಂಧಿಸಿದ್ದಾರೆ.
ಎಲೆಕ್ಟ್ರಿಕಲ್ ವಿಂಗ್ ಟೀಂ, ಸ್ವಿಮ್ಮಿಂಗ್ ಪೂಲ್ ನಿರ್ವಹಿಸುತ್ತಿತ್ತು. ಬಾಲಕಿ ಸಾವು ಪ್ರಕರಣ ಸಂಬಂಧ ಪ್ರೆಸ್ಟೀಜ್ ಹೋಮ್ ಓನರ್ ಅಸೋಸಿಯೇಷನ್ ಅಧ್ಯಕ್ಷ ದಬಾಶಿಶ್ವಸಿನ್ಹಾ, ಸಿಬ್ಬಂದಿಯಾದ ಜಾವೇದ್ ಸಫೀಕ್, ಸಂತೋಷ್ ಮಹಾರಾಣಾ, ಬಿಕಾಸ್, ಭಕ್ತ ಚರಣ್ ಪ್ರಧಾನ್, ಸುರೇಶ್, ಗೋವಿಂದ್ ಮಂಡಲ್ ಸೇರಿದಂತೆ 7 ಜನರನ್ನು ಬಂಧಿಸಲಾಗಿದೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 304ರಡಿ ಪ್ರಕರಣ ದಾಖಲಾಗಿದು, ತನಿಖೆ ಮುಂದುವರೆದಿದೆ