BIG NEWS: ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದ ಪ್ರಾಂಶುಪಾಲ; ಶಾಲೆಗೆ ಬೀಗ ಜಡಿದ ಅಧಿಕಾರಿಗಳು; 140 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಪ್ರಾಂಶುಪಾಲನೇ ಲೈಂಗಿಕ ದೌರ್ಜನ್ಯವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ ನ ಶಾಲೆಗೆ ಬೀಗ ಹಾಕಲಾಗಿದೆ.

ವರ್ತೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇತ್ತೀಚೆಗೆ ಶಾಲೆಗೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಪ್ರಾಂಶುಪಾಲನೇ ಅಟ್ಟಹಾಸ ಮೆರೆದಿದ್ದ. ಪ್ರಕರಣ ಸಂಬಂದ ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಇದೀಗ ಆತನ ಶಾಲೆಗೆ ಬೀಗ ಜಡಿಯಲಾಗಿದೆ ಎಂದು ತಿಳಿದುಬಂದಿದೆ.

ಅನಧಿಕೃತವಾಗಿ ಶಾಲೆ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶದ ಮೇರೆಗೆ ಶಾಲೆ ಬಂದ್ ಮಡಲಾಗಿದೆ. ಇದರಿಂದ ಶಾಲೆಯಲ್ಲಿ ಓದುತ್ತಿದ್ದ 140 ಮಕ್ಕಳ ಭವಿಷ್ಯ ಅತಂತ್ರವಾಗಿದೆ.

ಆರೋಪಿ ಲ್ಯಾಂಬರ್ಟ್ ಪುಷ್ಪರಾಜ್, ಕೋರಮಂಗಲದಲ್ಲಿ ಶಾಲೆ ನಿರ್ಮಾಣ ಮಾಡಲು ಅನುಮತಿ ಕೇಳಿದ್ದ ಆದರೆ ವರ್ತೂರು ಬಳಿ ಅನಧಿಕೃತವಾಗಿ ಶಾಲೆ ನಿರ್ಮಾಣ ಮಾಡಿದ್ದ. ಈ ಹಿನ್ನೆಲೆಯಲ್ಲಿ ಶಾಲೆಗೆ ಬೀಗ ಹಾಕಲಾಗಿದೆ.

ಈ ಶಾಲೆಯಲ್ಲಿ ಓದುತ್ತಿದ್ದ ಮಕ್ಕಳಿಗೆ ಬೇರೆ ಶಾಲೆಯಲ್ಲಿ ಓದಲು ಅವಕಾಶ ನೀಡಲಾಗಿದ್ದು, ತಾವು ಹೇಳಿದ ಶಾಲೆಗೆ ಸರ್ಕಾರದಿಂದಲೇ ದರ ನಿಗದಿ ಮಾಡಿ ಸೀಟ್ ವ್ಯವಸ್ಥೆ ಮಾಡಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read