alex Certify BIG NEWS: ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ: ವಿಜಯೇಂದ್ರ ಸ್ಪರ್ಧೆ ಬಗ್ಗೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ: ವಿಜಯೇಂದ್ರ ಸ್ಪರ್ಧೆ ಬಗ್ಗೆ ಮಹತ್ವದ ಮಾಹಿತಿ

ಮೈಸೂರು: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದು, ವಿಜಯೇಂದ್ರ ವರುಣಾದಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿತ್ತು. ಆದರೆ ನಾನೇ ಬೇಡವೆಂದು ಹೇಳಿದ್ದೇನೆ. ವಿಜಯೇಂದ್ರ ಸ್ಪರ್ಧೆ ವಿಚಾರದಲ್ಲಿ ಹೈಕಮಾಂಡ್ ಮನವೊಲಿಸುತ್ತೇನೆ ಎಂದು ಹೇಳಿದ್ದಾರೆ.

ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ವಿಜಯೇಂದ್ರ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟು ಬರುವುದಿಲ್ಲ. ವರುಣಾ ಕ್ಷೇತ್ರದಲ್ಲಿ ಒಳ್ಳೆಯ ಅಭ್ಯರ್ಥಿಯನ್ನೇ ಹಾಕುತ್ತೇವೆ. ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿಗೆ ಇತ್ತು ಎಂದು ಯಡಿಯೂರಪ್ಪ ಹೇಳಿದ್ದಾರೆ.

ವಿಜಯೇಂದ್ರ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ನನ್ನನ್ನು ಮುಖ್ಯಮಂತ್ರಿ ಮಾಡಿದ ಕ್ಷೇತ್ರ. ಶಿಕಾರಿಪುರ ಕ್ಷೇತ್ರವನ್ನು ಬಿಡಲು ಸಾಧ್ಯವಿಲ್ಲ. ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ ಚರ್ಚೆ ಬೇಡ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಾನು ಶಿಕಾರಿಪುರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಹಾಗಾಗಿ ವಿಜಯೇಂದ್ರ ಶಿಕಾರಿಪುರದಲ್ಲಿ ಸ್ಪರ್ಧಿಸಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...