alex Certify ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಚ್ಚರಿ ಅಭ್ಯರ್ಥಿ: ವಿಜಯೇಂದ್ರ ಬದಲು ಸಚಿವ ಸೋಮಣ್ಣ ಸ್ಪರ್ಧೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಚ್ಚರಿ ಅಭ್ಯರ್ಥಿ: ವಿಜಯೇಂದ್ರ ಬದಲು ಸಚಿವ ಸೋಮಣ್ಣ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರ ವರುಣಾದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿತ್ತು. ಆದರೆ, ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಸ್ವಕ್ಷೇತ್ರ ವರುಣಾದಲ್ಲಿ ಸಿದ್ದರಾಮಯ್ಯ ಅವರನ್ನು ಕಟ್ಟಿಹಾಕಲು ಬಿಜೆಪಿ ಚಿಂತನೆ ನಡೆಸಿದ್ದು, ವಸತಿ ಸಚಿವ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ. ಮೈಸೂರು ಜಿಲ್ಲೆಯಲ್ಲಿ ಸೋಮಣ್ಣ ಪ್ರಭಾವ ಹೊಂದಿದ್ದಾರೆ. ಲಿಂಗಾಯಿತ ಮಠಗಳೊಂದಿಗೂ ಅವರ ಒಡನಾಟ ಹೆಚ್ಚಾಗಿದೆ. ಅವರನ್ನು ವರುಣಾದಲ್ಲಿ ಕಣಕ್ಕಿಳಿಸಬೇಕೆಂಬ ಲೆಕ್ಕಾಚಾರ ಇದ್ದು, ಈ ಕುರಿತಾಗಿ ರಾಜ್ಯ ನಾಯಕರು ಮಾಡಿದ ಶಿಫಾರಸಿಗೆ ಬಿಜೆಪಿ ವರಿಷ್ಠರು ಒಪ್ಪಿಗೆ ಸೂಚಿಸಿದ್ದಾರೆ. ವರುಣದಿಂದ ವಿ. ಸೋಮಣ್ಣ ಸ್ಪರ್ಧೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...