ಮಂಡ್ಯ: ಕಾವೇರಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳ ಹೋರಾಟ ಮುಂದುವರೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದ ಬಳಿ ಹೋರಾಟ ಕೈಗೊಂಡಿದ್ದ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.
ಕೆಆರ್‌ಎಸ್ ಮುಖ್ಯ ದ್ವಾರದ ಬಳಿ ಬ್ಯಾರಿಕೇಡ್ ಹಾಕಿ ಹೋರಾಟಗಾರರನ್ನು ತಡೆಯಲಾಗಿದೆ. ಮಹಾರಾಜರ ಮನೆಯವರನ್ನು ಜಲಾಶಯದ ಒಳಗೆ ಬಿಟ್ಟಿದ್ದೀರಿ. ನಮ್ಮನ್ನು ಏಕೆ ಬಿಡುವುದಿಲ್ಲ ಎಂದು ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ನಿಷೇಧಿತ ಪ್ರದೇಶ ಎಂದು ಪೊಲೀಸರು ಸಬೂಬು ಹೇಳಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ತಮಿಳುನಾಡು ಸಿಎಂ ಸ್ಟಾಲಿನ್ ಭಾವಚಿತ್ರ ಹರಿದು ಹಾಕಿ ಕಪ್ಪು ಪಟ್ಟಿ ಪ್ರದರ್ಶಿಸಿದ್ದಾರೆ. ಪೊಲೀಸರು ವಾಟಾಳ್ ನಾಗರಾಜ್ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ.