ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಕ್ಕೆ ಕೇವಲ ಮೂರು ದಿನಗಳು ಮಾತ್ರ ಬಾಕಿ ಇದೆ. ಫೆ.28ರೊಳಗಾಗಿ ರಾಜ್ಯಾದ್ಯಂತ ಎಲ್ಲ ಅಂಗಡಿ ಮುಂಗಟ್ಟು, ಹೋಟೆಲ್ ಸೇರಿದಂತೆ ಎಲ್ಲೆಡೆ ಕನ್ನಡ ಕನ್ನಡಾಯವಾಗಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಗಡುವು ಮುಗಿಯುವುದರೊಳಗಾಗಿ ಕನ್ನಡದಲ್ಲಿ ಬೋರ್ಡ್ ಹಾಕದಿದ್ದರೆ ಕರ್ನಾಟಕ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ನಾಮಫಲಕದ ಜೊತೆಗೆ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ಐಟಿಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ಮುಂದಿನ ತಿಂಗಳು ಎಲ್ಲಾ ಕನ್ನಡ ಸಂಘಟನೆಗಳು ಒಟ್ಟಾಗಿ ಸಭೆ ನಡೆಸುತ್ತೇವೆ ಎಂದರು.