ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಶುಕ್ರವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಪಹರಣ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳು ಬಂಧನ ಭೀತಿಯಿಂದ ಬೇರೆ ಕಡೆಗೆ ತೆರಳಿದ್ದಾರೆ ಎನ್ನಲಾಗಿದೆ.
ವರ್ತೂರು ಪ್ರಕಾಶ್ ಫಾರ್ಮ್ ಹೌಸ್ ನಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಆಂಧ್ರದ ಮಹಿಳೆಯೊಬ್ಬರ ಕೈವಾಡವಿರುವ ಅನುಮಾನ ವ್ಯಕ್ತವಾಗಿದೆ. ಹಣಕಾಸು ಸೇರಿದಂತೆ ಹಲವು ಆಯಾಮದಲ್ಲಿ ತನಿಖೆ ಕೈಗೊಳ್ಳಲಾಗಿದೆ. ಶುಕ್ರವಾರ ಕಾರ್ಯಾಚರಣೆ ನಡೆಸಿ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಆತ ನೀಡಿದ ಮಾಹಿತಿಯ ಅನ್ವಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ಹೇಳಲಾಗಿದೆ.