alex Certify ಕುಲಪತಿ ಹುದ್ದೆ ಪಡೆಯಲು ಹಣ ಕೊಟ್ಟ ಪ್ರೊಫೆಸರ್ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಲಪತಿ ಹುದ್ದೆ ಪಡೆಯಲು ಹಣ ಕೊಟ್ಟ ಪ್ರೊಫೆಸರ್ ಸಸ್ಪೆಂಡ್

ಮಂಗಳೂರು: ಕುಲಪತಿ ಹುದ್ದೆ ಪಡೆಯುವ ಉದ್ದೇಶದಿಂದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರಿಗೆ 17.50 ಲಕ್ಷ ರೂಪಾಯಿ ನೀಡಿದ್ದ ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜೈಶಂಕರ್ ಅವರನ್ನು ಅಮಾನತು ಮಾಡಲಾಗಿದೆ.

ಸೂಕ್ಷ್ಮಣು ಜೀವ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ.ಎಂ. ಜೈಶಂಕರ್ ಅವರು ಕುಲಪತಿ ಹುದ್ದೆ ಪಡೆಯಲು ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರಿಗೆ ಹಣ ನೀಡಿದ್ದರು.

ಮಂಗಳೂರು ವಿವಿ ಕುಲಪತಿ ಡಾ.ಪಿ.ಎಸ್. ಯಡಪಡಿತ್ತಾಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಿಂಡಿಕೇಟ್ ವಿಶೇಷ ಸಭೆಯಲ್ಲಿ ಜೈಶಂಕರ್ ಅವರನ್ನು ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಕರಣದ ಬಗ್ಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆ ನಡೆಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...