alex Certify ಟೀಂ ಇಂಡಿಯಾ ಮಹಿಳಾ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ತಾಯಿ ಕೊರೋನಾಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೀಂ ಇಂಡಿಯಾ ಮಹಿಳಾ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ತಾಯಿ ಕೊರೋನಾಗೆ ಬಲಿ

ಚಿಕ್ಕಮಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬ(63) ಕೊರೊನಾದಿಂದ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಚೆಲುವಾಂಬ ಅವರಿಗೆ ಅನಾರೋಗ್ಯದ ಕಾರಣ ಏಪ್ರಿಲ್ 20ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ಟೆಟ್ಸ್ ನಲ್ಲಿ ಪಾಸಿಟಿವ್ ವರದಿ ಬಂದಿದ್ದು, 4 ದಿನಗಳಿಂದ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ರಾತ್ರಿ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕೋವಿಡ್ ಮಾರ್ಗಸೂಚಿಯಂತೆ ಅವರ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿದೆ. ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಚೆಲುವಾಂಬ ಅಗಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...