ಇತ್ತೀಚೆಗಷ್ಟೇ ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರ್ಕಾರದಿಂದ ನಾಮ ನಿರ್ದೇಶನಗೊಂಡಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ದೇವರ ಹೆಸರಿನಲ್ಲಿ ಕನ್ನಡದಲ್ಲಿ ವೀರೇಂದ್ರ ಹೆಗ್ಗಡೆಯವರು ಪ್ರಮಾಣ ವಚನ ಸ್ವೀಕರಿಸಿದ್ದು, ಈ ಹಿಂದೆ ನಟ ಜಗ್ಗೇಶ್ ಕೂಡ ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ತಮ್ಮ ಪ್ರಮಾಣವಚನವನ್ನು ಸ್ವೀಕರಿಸಿದ್ದರು.
ಕೇಂದ್ರ ಸರ್ಕಾರ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗಡೆ, ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ, ಅಥ್ಲೀಟ್ ಪಿ.ಟಿ. ಉಷಾ ಹಾಗೂ ಚಲನಚಿತ್ರ ಕಥೆ – ಸಂಭಾಷಣೆಗಾರ ವಿಜಯೇಂದ್ರ ಪ್ರಸಾದ್ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿತ್ತು.