ನವದೆಹಲಿ: ಹಿರಿಯ ಬಾಲಿವುಡ್ ನಟ ಮತ್ತು ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶನಿವಾರ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಥುನ್ ಚಕ್ರವರ್ತಿ ಅವರ ಆಪ್ತ ಮೂಲಗಳು ನಟನಿಗೆ ಅಸ್ವಸ್ಥತೆ ಉಂಟಾಗಿದ್ದು, ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿಸಿವೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.