alex Certify ಗುಬ್ಬಿ ವೀರಣ್ಣನವರ ಪುತ್ರಿ ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಲತಾ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಬ್ಬಿ ವೀರಣ್ಣನವರ ಪುತ್ರಿ ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಲತಾ ಇನ್ನಿಲ್ಲ

ಖ್ಯಾತ ರಂಗಭೂಮಿ ಕಲಾವಿದ ಗುಬ್ಬಿ ವೀರಣ್ಣನವರ ಪುತ್ರಿ ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಲತಾ ವಿಧಿವಶರಾಗಿದ್ದಾರೆ. ಕೆಲ ದಿನಗಳ ಹಿಂದೆ ಹೃದಯಘಾತಕ್ಕೊಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

70 ವರ್ಷದ ಹೇಮಲತಾ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಸೋಮೇಶ್ವರ ಲೇಔಟ್ ನಲ್ಲಿ ವಾಸಿಸುತ್ತಿದ್ದು, ಹೇಮಲತಾ ಅವರ ಅಂತಿಮ ಇಚ್ಛೆಯಂತೆ ಕುಟುಂಬಸ್ಥರು ಅವರ ದೇಹವನ್ನು ಖಾಸಗಿ ಆಸ್ಪತ್ರೆಗೆ ದಾನ ಮಾಡಿದ್ದಾರೆ.

ಭರತನಾಟ್ಯ ಕಲಾವಿದೆಯೂ ಆಗಿದ್ದ ಹೇಮಲತಾ ಅವರು ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು. ಕಲ್ಯಾಣ್ ಕುಮಾರ್ ಅವರ ‘ಕಲಾವತಿ’ ಚಿತ್ರದಲ್ಲಿ ಹೇಮಲತಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ 1966 ರಲ್ಲಿ ಬಿಡುಗಡೆಯಾದ ವರನಟ ಡಾ. ರಾಜಕುಮಾರ್ ಅವರ ‘ಎಮ್ಮೆ ತಮ್ಮಣ್ಣ’ ಚಿತ್ರದಲ್ಲೂ ಹೇಮಲತಾ ಅಭಿನಯಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...