
ಬೆಂಗಳೂರು: ಬೆಂಗಳೂರಿಗೆ ಇಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಲಿದ್ದಾರೆ. ಇಂದು ಸಂಜೆ 4 ರಿಂದ 6 ಗಂಟೆವರೆಗೆ ಕೆಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಾಯವಾಗಲಿದೆ.
ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ, ಎಂಜಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.