ನವದೆಹಲಿ: ಸಂಸತ್ ಭವನದಲ್ಲಿ ಉಪ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎನ್.ಡಿ.ಎ. ಅಭ್ಯರ್ಥಿ ಜಗದೀಪ್ ಧನಕರ್ ಮುನ್ನಡೆ ಸಾಧಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.
ಉಪರಾಷ್ಟ್ರಪತಿ ಚುನಾವಣೆಯಲ್ಲಿ 725 ಸಂಸದರು ಮತ ಚಲಾಯಿಸಿದ್ದಾರೆ. ಅನಾರೋಗ್ಯದ ಕಾರಣ ಬಿಜೆಪಿ ಸಂಸದರಾದ ಸನ್ನಿ ಡಿಯೋಲ್, ಸಂಜೆಯ ಧೋತ್ರೆ ಮತದಾನ ಮಾಡಿರಲಿಲ್ಲ.
ಮತದಾನ ಮಾಡದಿರಲು ತೃಣಮೂಲ ಕಾಂಗ್ರೆಸ್ ಪಕ್ಷ ನಿರ್ಧರಿಸಿತ್ತು. ಪಕ್ಷದ ನಿರ್ಣಯವನ್ನು ಧಿಕ್ಕರಿಸಿ ಶಿಶಿರ್ ಮತ್ತು ದಿಬೆಂದು ಅಧಿಕಾರಿ ಮತದಾನ ಮಾಡಿದ್ದರು. 34 ಸಂಸದರು ಮತದಾನದಿಂದ ದೂರ ಉಳಿದಿದ್ದರು.
ಉಪ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾದ ಕೂಡಲೇ ಜಗದೀಪ್ ಧನಕರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಶುಭ ಕೋರಲಿದ್ದಾರೆ.
ಕರ್ನಾಟಕದ ಮಾರ್ಗರೇಟ್ ಆಳ್ವ ಅವರು ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಜಗದೀಪ್ ಧನಕರ್ ಅವರ ಆಯ್ಕೆ ಬಹುತೇಕ ಖಚಿತವಾಗಿದ್ದು, ಕೆಲವೇ ಕ್ಷಣಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ನವದೆಹಲಿ; ಸಂಸತ್ ಭವನದಲ್ಲಿ ಉಪ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎನ್.ಡಿ.ಎ. ಅಭ್ಯರ್ಥಿ ಜಗದೀಪ್ ಧನಕರ್ ಮುನ್ನಡೆ ಸಾಧಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.