ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ ಸುಧಾಕರ್ ಗೆಲುವು ದಾಖಲಿಸಿದ್ದು, ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ ಒತ್ತಾಯ ಕೇಳಿಬಂದಿದೆ.
ಚುನಾವಣಾ ಪ್ರಚಾರದ ವೇಳೆ ಡಾ.ಕೆ ಸುಧಾಕರ್ ಗೆದ್ದರೆ ರಾಜೀನಾಮೆ ನೀಡುವುದಾಗಿ ಪ್ರದೀಪ್ ಈಶ್ವರ್ ಸವಾಲು ಹಾಕಿದ್ದರು. ಹೀಗಾಗಿ ಅವರು ರಾಜೀನಾಮೆ ಕೊಡಲಿ ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಈ ವಿಚಾರವನ್ನಿಟ್ಟುಕೊಂಡೇ ನೆಟ್ಟಿಗರು ಪ್ರದೀಪ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಪ್ರದೀಪ್ ಈಶ್ವರ್ ರಾಜೀನಾಮೆ ನೀಡಿದ್ದಾರೆ ಎಂದು ಪೋಸ್ಟರ್ ಹರಿಬಿಡಲಾಗುತ್ತಿದೆ.
‘’ನನ್ನ ಮಾತಿಗೆ ನಾನು ಬದ್ಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಹೆಚ್ಚು ಮತಗಳನ್ನು ಪಡೆದಿರುವುದರಿ೦ದ ನಾನು ನನ್ನ ಶಾಸಕ ಸ್ಥಾನಕ್ಕೆ ನೈತಿಕ ಹೊಣೆ ಮತ್ತು ದಿನಾ೦ಕ 5/6/2024 ರಂದು ಬೆಳಗ್ಗೆ 11 ಗಂಟೆಗೆ ರಾಜೀನಾಮೆ ನೀಡಲಿದ್ದೇನೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನೆಡೆಗೆ ನಾನೇ ನೇರ ಹೊಣೆ’’ ಎಂಬ ಪೋಸ್ಟರ್ ಹರಿಬಿಡಲಾಗುತ್ತಿದೆ.