
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದಿದ್ದು, ಹಲವು ಜನಪರ ಯೋಜನೆಗಳನ್ನು ಘೋಷಿಸಿದೆ. ಇದರ ಮಧ್ಯೆ ಎದುರಾದ ಕೋವಿಡ್ ಸಾಂಕ್ರಾಮಿಕವನ್ನು ಯಶಸ್ವಿಯಾಗಿ ಎದುರಿಸಲಾಗಿದೆ.
ಇದರ ಜೊತೆಗೆ ಸಾರ್ವಜನಿಕರ ಆರೋಗ್ಯಕ್ಕಾಗಿ ಆಯುಷ್ಮಾನ್ ಭಾರತ್, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೆರವಾಗಲು ಪಿಎಂ ಕಿಸಾನ್ ಸಮ್ಮಾನ್ ಯೋಜನೆ, ಹೆಣ್ಣು ಮಕ್ಕಳಿಗಾಗಿ ಸುಕನ್ಯಾ ಸಮೃದ್ಧಿ ಯೋಜನೆ, ವಿದ್ಯಾರ್ಥಿನಿಯರಿಗಾಗಿ ಭೇಟಿ ಬಚಾವ್ – ಬೇಟಿ ಪಡಾವ್, ಸ್ವಚ್ಛ ಭಾರತ್ ಮೊದಲಾದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ.
ಇದರ ಮಧ್ಯೆ ಕೇಂದ್ರ ಸಚಿವ ಡಾ. ಮಾನ್ಸುಕ್ ಮಾಂಡವಿಯ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಶೇರ್ ಮಾಡಿರುವ ವಿಡಿಯೋ ಒಂದು ಇಂಟರೆಸ್ಟಿಂಗ್ ಆಗಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಂತೆ ವೇಷ ಧರಿಸಿರುವ ಪುಟ್ಟ ಬಾಲಕನೊಬ್ಬ A ಯಿಂದ Z ವರೆಗಿನ ವರ್ಣಮಾಲೆ ಮೂಲಕ ಮೋದಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಹೆಸರು ಹೇಳಿದ್ದಾನೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.