ಆಸ್ಪತ್ರೆಯೊಂದರಲ್ಲಿ ರೋಗಿಯ ಸಂಬಂಧಿಕರು ವೈದ್ಯರಿಗೆ ಥಳಿಸಿರುವ ಘಟನೆಯ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಈ ಘಟನೆ ನಾಸಿಕ್ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಕಂಡುಬಂದಿದೆ.
ವೈರಲ್ ಆಗಿರುವ ಆಘಾತಕಾರಿ ವಿಡಿಯೋದಲ್ಲಿ, ವೈದ್ಯರಿಗೆ ರೋಗಿಯ ಸಂಬಂಧಿಕರು ಥಳಿಸುತ್ತಿರುವ ದೃಶ್ಯವನ್ನು ನೋಡಬಹುದು. ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ವೈದ್ಯರಿಗೆ ಸಂಬಂಧಿಕರು ಥಳಿಸಿದ್ದಾರೆ. ಇಡೀ ಘಟನೆಯ ದೃಶ್ಯ ಆಸ್ಪತ್ರೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ವರದಿಗಳ ಪ್ರಕಾರ, ಈ ಘಟನೆ ಆಗಸ್ಟ್ 28 ರಂದು ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ವೈದ್ಯರ ಮೇಲೆ ಕೋಪಗೊಂಡ ರೋಗಿಯ ಕೆಲ ಸಂಬಂಧಿಕರು ಆಸ್ಪತ್ರೆಯೊಳಗೆ ಜಮಾಯಿಸಿದ್ದು, ವೈದ್ಯನಿಗೆ ಹಿಗ್ಗಾಮುಗ್ಗಾ ಗೂಸಾ ನೀಡಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಇತರೆ ಜನರು ಮಧ್ಯಪ್ರವೇಶಿಸಿ ವೈದ್ಯರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಸಿಸಿ ಟಿವಿ ದೃಶ್ಯಾವಳಿಗಳು ಬೆಳಕಿಗೆ ಬಂದ ನಂತರ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.