ಬೆಂಗಳೂರು: ಮಹಿಳೆಯರಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಅರಕಲಗೂಡಿನ ಕುಂಚೇನಹಳ್ಳಿಯ ಹರೀಶ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಹರೀಶ ಕಳೆದ ಮೂರು ತಿಂಗಳಿಂದ ಮಹಿಳೆಯೊಬ್ಬರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಅಶ್ಲೀಲ ವೀಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ.
ನೊಂದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರತಿದಿನ ಇದೇ ರೀತಿ ಅನೇಕ ಮಹಿಳೆಯರಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿರುವುದು ಗೊತ್ತಾಗಿದೆ. ಆತನನ್ನು ಬಂಧಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.