alex Certify ಅಪರಿಚಿತ ನಂಬರ್ ಗಳಿಂದ ಮಹಿಳೆಗೆ ಅಶ್ಲೀಲ ವಿಡಿಯೋ ಸೆಂಡ್, ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪರಿಚಿತ ನಂಬರ್ ಗಳಿಂದ ಮಹಿಳೆಗೆ ಅಶ್ಲೀಲ ವಿಡಿಯೋ ಸೆಂಡ್, ಆರೋಪಿ ಅರೆಸ್ಟ್

ಶಿವಮೊಗ್ಗ: ಮಹಿಳೆಯ ಮೊಬೈಲ್ ಗೆ ಅಶ್ಲೀಲ ವೀಡಿಯೋ ಕಳುಹಿಸಿ ಪದೇ ಪದೇ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ರಿಪ್ಪನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ದೇವಳ್ಳಿ ಗ್ರಾಮದ ಬಾಬು ಬಂಧಿತ ಆರೋಪಿ ಎಂದು ಹೇಳಲಾಗಿದೆ.

ಅಪರಿಚಿತ ನಂಬರ್ ಗಳಿಂದ ಮಹಿಳೆಯ ಮೊಬೈಲ್ ಗೆ ಅಶ್ಲೀಲ ವೀಡಿಯೋ ಕಳುಹಿಸಿ ಪದೇ ಪದೇ ಕರೆಮಾಡಿ ಹಿಂಸೆ ನೀಡಿದ್ದ ಬಗ್ಗೆ ರಿಪ್ಪನ್ ಪೇಟೆ ಸಮೀಪದ ಗವಟೂರು ಗ್ರಾಮದ ಮಹಿಳೆ ದೂರು ನೀಡಿದ್ದರು. ಅಪರಿಚಿತ ನಂಬರುಗಳ ಪತ್ತೆಗೆ ಮುಂದಾದ ಪೊಲೀಸರು ನಕಲಿ ದಾಖಲೆ ಸೃಷ್ಟಿಸಿ ದುರ್ಬಳಕೆ ಮಾಡಿಕೊಂಡಿದ್ದ ಎರಡು ನಂಬರ್ ಗಳನ್ನು ಪತ್ತೆ ಹಚ್ಚಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮೀಪ್ರಸಾದ್, ಡಿವೈಎಸ್ಪಿ ಶಾಂತವೀರ ಮಾರ್ಗದರ್ಶನದಲ್ಲಿ ಹೊಸನಗರ ಸಿಪಿಐ ಗಿರೀಶ್ ನೇತೃತ್ವದಲ್ಲಿ ಪಿಎಸ್ಐ ಶಿವಾನಂದ ಕೋಳಿ, ಎಎಸ್ಐ ಹಾಲಪ್ಪ ಮತ್ತು ಸಿಬ್ಬಂದಿಗಳಾದ ಶಿವಕುಮಾರ್ ಉಮೇಶ, ಮಧುಸೂದನ್ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...