alex Certify ಸ್ನಾನ ಮಾಡುತ್ತಿದ್ದ ಮಹಿಳೆಗೆ ಮೊಬೈಲ್ ಕ್ಯಾಮೆರಾ ಕಂಡು ಶಾಕ್: ನೆರೆಮನೆಯಲ್ಲಿ ಸ್ನಾನದ ದೃಶ್ಯ ಸೆರೆ ಹಿಡಿದ ಕಿಡಿಗೇಡಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ನಾನ ಮಾಡುತ್ತಿದ್ದ ಮಹಿಳೆಗೆ ಮೊಬೈಲ್ ಕ್ಯಾಮೆರಾ ಕಂಡು ಶಾಕ್: ನೆರೆಮನೆಯಲ್ಲಿ ಸ್ನಾನದ ದೃಶ್ಯ ಸೆರೆ ಹಿಡಿದ ಕಿಡಿಗೇಡಿ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೆರೆಮನೆ ಮಹಿಳೆಯ ಸ್ನಾನದ ದೃಶ್ಯ ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ(22) ಬಂಧಿತ ಆರೋಪಿ. ಈತ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಎಂದು ಹೇಳಲಾಗಿದೆ. ಕೆಮ್ರಾಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಬಳಿ ಬುಧವಾರ ರಾತ್ರಿ ಘಟನೆ ನಡೆದಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ. ಮಹಿಳೆ ಸ್ನಾನ ಮಾಡುವಾಗ ವಿಡಿಯೋ ಮಾಡುತ್ತಿದ್ದು, ಮೊಬೈಲ್ ಕ್ಯಾಮೆರಾ ಗಮನಿಸಿದ ಮಹಿಳೆ ಕಿರುಚಾಡಿದ್ದಾರೆ. ನೆರಮನೆಯವರು ಧಾವಿಸಿ ಬಂದು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮೊಬೈಲ್ ಸಹಿತ ಸುಮಂತ್ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಮುಚ್ಚಳಿಕೆ ಬರೆಸಿಕೊಂಡು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...