ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟ ಶುರುವಾಗಿದೆ.
ತುರ್ತು ವಿಚಾರಣೆಗೆ ಹಾಜರಾಗುವಂತೆ ಹೆಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ಜಾರಿ ಮಾಡಿದೆ. ವಿಶೇಷ ತನಿಖಾ ತಂಡ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ತಲುಪಿದ 24 ಗಂಟೆ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಇದರೊಂದಿಗೆ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಅಪ್ಪ. ಮಗನಿಗೆ ಸಂಕಷ್ಟ ಶುರುವಾಗಿದೆ. ಏಪ್ರಿಲ್ 28ರಂದು ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿತ್ತು.