ಉಜ್ಜೈನ್: ಈ ವಾರದ ಆರಂಭದಲ್ಲಿ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯದಲ್ಲಿ ಎರಡು ಭಕ್ತರ ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಇ-ರಿಕ್ಷಾದಲ್ಲಿ ಕುಳಿತುಕೊಳ್ಳುವ ವಿಚಾರದಲ್ಲಿ ಭಕ್ತರು ತೀವ್ರ ವಾಗ್ವಾದಕ್ಕಿಳಿದು ಪರಸ್ಪರ ಹೊಡೆದಾಡಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದ ಭಕ್ತರು ಈ ಗಲಾಟೆಯಿಂದ ಭಯಭೀತರಾಗಿ ನೋಡುತ್ತಿರುವಾಗ ಅವರು ಪರಸ್ಪರ ಗುದ್ದುವುದು ಮತ್ತು ಹೊಡೆಯುವುದನ್ನು ವೈರಲ್ ವೀಡಿಯೊ ತೋರಿಸುತ್ತದೆ. ಕೆಲವರು ಹೋರಾಟದಲ್ಲಿ ಮಧ್ಯಪ್ರವೇಶಿಸುತ್ತಿರುವ ದೃಶ್ಯವೂ ಕಂಡು ಬರುತ್ತಿದೆ.
“ಭಕ್ತರ ನಡುವಿನ ಜಗಳದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಆದರೆ, ಅವರ್ಯಾರೂ ದೂರು ದಾಖಲಿಸಿಕೊಂಡಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.