alex Certify Video: ನೋಡ ನೋಡುತ್ತಿದ್ದಂತೆಯೇ ಜನನಿಬಿಡ ರಸ್ತೆಯಲ್ಲಿ ಹೊತ್ತಿ ಉರಿದ ಕಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Video: ನೋಡ ನೋಡುತ್ತಿದ್ದಂತೆಯೇ ಜನನಿಬಿಡ ರಸ್ತೆಯಲ್ಲಿ ಹೊತ್ತಿ ಉರಿದ ಕಾರು

ಜನನಿಬಿಡ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ನೋಡ ನೋಡುತ್ತಿದ್ದಂತೆಯೇ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಇಂತಹದೊಂದು ಘಟನೆ ರಾಜ್ಯ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.

ನವದೆಹಲಿಯ ಡಿಎನ್‌ಡಿ ಫ್ಲೈ ಓವರ್ ಮೇಲೆ ಈ ಕಾರು ಚಲಿಸುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಕುಟುಂಬ ತಕ್ಷಣವೇ ಹಾರಿ ಅಪಾಯದಿಂದ ಪಾರಾಗಿದ್ದು, ಆದರೆ ಇಬ್ಬರು ಮಹಿಳೆಯರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಕಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ಈ ಘಟನೆಯಿಂದ ಫ್ಲೈ ಓವರ್ ಮೇಲೆ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...