ಸೀರೆಯಿಲ್ಲದ ಸರಸ್ವತಿ ವಿಗ್ರಹದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವ್ಯಾಪಕ ಟೀಕೆ ಹಾಗೂ ಪ್ರತಿಭಟನೆಗೆ ಕಾರಣವಾಗಿದೆ.
ತ್ರಿಪುರಾ ಬಳಿಯ ಲಿಚುಬಗಾನ್ ಸರ್ಕಾರಿ ಆಸ್ಪತ್ರೆಯಲ್ಲಿ ಸರಸ್ವತಿ ಪೂಜಾ ಆಚರಣೆಯಲ್ಲಿ ಸೀರೆಯಿಲ್ಲದ ಸರಸ್ವತಿ ವಿಗ್ರಹದ ಪೂಜೆ ಮಾಡಲಾಗಿದೆ.
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯರ್ತರು ಬುಧವಾರ ಸರ್ಕಾರಿ ಕಲಾ ಮತ್ತು ಕರಕುಶಲ ಕಾಲೇಜಿಗೆ ನುಗ್ಗಿ ಸರಸ್ವತಿ ದೇವಿಯ ವಿಗ್ರಹವನ್ನು ಸೀರೆಯಿಂದ ಹೊದಿಸುವಂತೆ ಸಂಸ್ಥೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಘಟನೆ ಬಗ್ಗೆ ಎಬಿವಿಪಿ ಸದಸ್ಯರು ಕಳವಳ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರಿ ಕಲಾ ಮತ್ತು ಕರಕುಶಲ ಕಾಲೇಜಿನಲ್ಲಿ ಸರಸ್ವತಿ ದೇವಿಯ ವಿಗ್ರಹವನ್ನು ತುಂಬಾ ತಪ್ಪು ಮತ್ತು ಅಶ್ಲೀಲ ರೀತಿಯಲ್ಲಿ ಕೆತ್ತಲಾಗಿದೆ . ಈ ವಿಗ್ರಹವನ್ನು ಕಾಲೇಜಿನ ವಿದ್ಯಾರ್ಥಿಗಳು ರಚಿಸಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ.