
ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ತನಿಖೆಗೆ ಮುಂದಾಗಿದ್ದಾರೆ. ನಾವು ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಲು ಯತ್ನಿಸುತ್ತಿದ್ದೇವೆ ಹಾಗೂ ಅವರಿಗೆ ಈ ರೀತಿಯ ಹುಚ್ಚು ಸಾಹಸಗಳಿಂದಾಗಿ ಉಂಟಾಗಬಲ್ಲ ದುರಂತಗಳ ಬಗ್ಗೆ ಅರಿವು ಮೂಡಿಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬಸ್ಸಿನ ಹಿಂಭಾಗದಲ್ಲಿ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಈ ವಿಡಿಯೋವನ್ನು ಸೆರೆಹಿಡಿದಿದ್ದಾರೆ. ವಿಡಿಯೋದಲ್ಲಿ ಕಾಲೇಜು ವಿದ್ಯಾರ್ಥಿಗಳು ಬಸ್ನ ಹಿಂಭಾಗದ ಬಾಗಿಲಿನಲ್ಲಿ ನೇತಾಡುತ್ತಿರೋದನ್ನು ಕಾಣಬಹುದಾಗಿದೆ. ಇದರಲ್ಲಿ ಒಬ್ಬರು ಬಸ್ನ ಮೇಲ್ಭಾಗವನ್ನು ಹತ್ತಿದರೆ ಇನ್ನುಳಿದವರು ಬಸ್ನ ಬಾಗಿಲಲ್ಲೇ ಸಾಹಸ ಮಾಡಿದ್ದಾರೆ.
ಈ ಘಟನೆಯ ಸಂಬಂಧ ನಾವು ದೂರನ್ನು ಸ್ವೀಕರಿಸಿದ್ದೇವೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಆದಷ್ಟು ಬೇಗ ವಿದ್ಯಾರ್ಥಿಗಳನ್ನು ಸೆರೆಹಿಡಿಯಲಾಗುತ್ತೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.