alex Certify ʼಕಾಳಿʼ ರೂಪದಲ್ಲಿ ಪಾನಿಪುರಿ ಸವಿದ ಯುವತಿ; ವೈರಲ್‌ ವಿಡಿಯೋಗೆ ವ್ಯಾಪಕ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಕಾಳಿʼ ರೂಪದಲ್ಲಿ ಪಾನಿಪುರಿ ಸವಿದ ಯುವತಿ; ವೈರಲ್‌ ವಿಡಿಯೋಗೆ ವ್ಯಾಪಕ ಆಕ್ರೋಶ

ಪುಣೆ: ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋವೊಂದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋದಲ್ಲಿ ಕಾಳಿ ದೇವಿಯಂತೆ ವೇಷ ಧರಿಸಿದ ಯುವತಿಯೊಬ್ಬರು ರಸ್ತೆ ಬದಿಯಲ್ಲಿ ಪಾನಿಪುರಿ ಸವಿಯುತ್ತಿರುವ ದೃಶ್ಯವಿದೆ.

ಈ ವಿಡಿಯೋವನ್ನು ಹಂಚಿಕೊಂಡ ಯುವತಿಯನ್ನು ಅನೇಕರು ತರಾಟೆಗೆ ತೆಗೆದುಕೊಂಡಿದ್ದಾರೆ. “ದೇವರ ವೇಷ ಧರಿಸಿ ಈ ರೀತಿ ಮಾಡುವುದೇ?” ಎಂದು ಪ್ರಶ್ನಿಸಿದ್ದಾರೆ. ಇನ್ನೂ ಕೆಲವರು ವಿಡಿಯೋವನ್ನು ತೆಗೆದುಹಾಕುವಂತೆ ಆಗ್ರಹಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು “ಜೈ ಮಹಾಕಾಳಿ” ಎಂದು ಕಾಮೆಂಟ್ ಮಾಡಿ ಹೃದಯ ಮತ್ತು ಪ್ರಾರ್ಥನೆಯ ಇಮೋಜಿಗಳನ್ನು ಹಾಕಿದ್ದಾರೆ. ಆದರೆ ಹೆಚ್ಚಿನವರು ಈ ವಿಡಿಯೋ ಅಸಭ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಯುವತಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

 

View this post on Instagram

 

A post shared by Jaya Jerry (@jayajerry8572)

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...