ವಿಧಾನ ಸಭಾ ಚುನಾವಣೆ ಸನಿಹವಾಗುತ್ತಿರುವ ಗೋವಾಗೆ ಭೇಟಿ ಕೊಟ್ಟಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಇಲ್ಲಿನ ಮೊರ್ಪ್ರಿಲಾ ಗ್ರಾಮದ ಬುಡಕಟ್ಟು ಜನಾಂಗದೊಂದಿಗೆ ಜಾನಪದ ನೃತ್ಯದಲ್ಲಿ ಹೆಜ್ಜೆ ಹಾಕಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ 43 ಸೆಕೆಂಡ್‌ಗಳ ಈ ಕ್ಲಿಪ್‌ನಲ್ಲಿ, ಕೆಂಪು ಸೀರೆಯುಟ್ಟ ಪ್ರಿಯಾಂಕಾ ಗಾಂಧಿ ಬುಡಕಟ್ಟು ಮಹಿಳೆಯರೊಂದಿಗೆ ನೃತ್ಯ ಮಾಡುತ್ತಿರುವುದನ್ನು ನೋಡಬಹುದಾಗಿದೆ.
40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ.