
ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದೆನ್ನಲಾದ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ 4 ಗಂಟೆ ವಿಚಾರಣೆ ಮುಗಿಸಿ ಠಾಣೆಯಿಂದ ಹೊರ ಬಂದಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಂದ ದಿನೇಶ್ ಕಲ್ಲಹಳ್ಳಿ ವಿಚಾರಣೆ ಮುಕ್ತಾಯವಾಗಿದ್ದು ಹೊರಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಬಳಿ ಲಭ್ಯವಿರುವ ಮಾಹಿತಿಯನ್ನು ನೀಡಿದ್ದೇನೆ. ತನಿಖೆಗೆ ಬೇಕಾದ ಮಾಹಿತಿಯನ್ನು ನೀಡಿದ್ದೇನೆ. ಮುಚ್ಚಿದ ಲಕೋಟೆಯಲ್ಲಿ ಇದ್ದ ಸಿಡಿಯನ್ನು ನೀಡಿದ್ದೇನೆ. ಉಳಿದಂತೆ ಯಾವುದೇ ವಿಚಾರ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳಿದ್ದಾರೆ.