
ಬೆಂಗಳೂರು: ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಹೊತ್ತಿರುವ ರಮೇಶ್ ಜಾರಕಿಹೊಳಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಬಿಜೆಪಿ ಸರ್ಕಾರಕ್ಕೆ ಮುಜುಗರ ತಪ್ಪಿಸಲು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ, ರಾಜೀನಾಮೆ ನೀಡದಿರಲು ನಿರ್ಧರಿಸಿರುವ ರಮೇಶ್ ಜಾರಕಿಹೊಳಿ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಸಿದ್ದಾರೆ.
ಮುಜುಗರದಿಂದ ಪಾರಾಗಲು ಅವರು ವಕೀಲರೊಂದಿಗೆ ಚರ್ಚೆ ನಡೆಸಿದ್ದು, ಕಾನೂನು ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಸಹೋದರ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.