
ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರು, ಶೌಚಾಲಯದಲ್ಲಿ ಮೊಬೈಲ್ ಮೂಲಕ ತಮ್ಮ ಸಹಪಾಠಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು ಎನ್ನಲಾದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ಗೆ ವರ್ಗಾಯಿಸಿದೆ.
ಈ ಹಿನ್ನಲೆಯಲ್ಲಿ ಬುಧವಾರದಂದು ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡ ಕಾಲೇಜಿಗೆ ಭೇಟಿ ನೀಡಿದ್ದು, ಸಂತ್ರಸ್ತ ವಿದ್ಯಾರ್ಥಿನಿ, ಆಕೆಯ ಸಹಪಾಠಿಗಳು, ಕಾಲೇಜಿನ ಆಡಳಿತ ಮಂಡಳಿ ಮುಖ್ಯಸ್ಥರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ.
ಅಲ್ಲದೆ ಆಳೆತ್ತರದ ಗೊಂಬೆಯನ್ನು ಕಾಲೇಜಿನ ಶೌಚಾಲಯದ ಎದುರು ನಿಲ್ಲಿಸಿ ಸನ್ನಿವೇಶವನ್ನು ಮರುಸೃಷ್ಟಿ ಮಾಡಲಾಗಿದ್ದು, ಇದರ ಜೊತೆಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಮಹಿಳಾ ಸಬ್ ಇನ್ಸ್ಪೆಕ್ಟರ್ ಅವರಿಂದ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.