ತನ್ನ ಹಾಡುಗಳಿಂದಲೇ ಭರ್ಜರಿ ಸೌಂಡ್ ಮಾಡಿರುವ “ಗನ್ಸ್ ಅಂಡ್ ರೋಸಸ್” ಚಿತ್ರದ ‘ಎದುರೇ ನೀನು ನಿಂತರೆ’ ಎಂಬ ವಿಡಿಯೋ ಹಾಡು ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.
ಚೇತನ್ ನಾಯಕ್ ಮತ್ತು ಪೃಥ್ವಿ ಭಟ್ ಈ ಹಾಡಿಗೆ ಧ್ವನಿಯಾಗಿದ್ದು, ಶಶಿಕುಮಾರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಪ್ರಮೋದ್ ಮರವಂತೆ ಅವರ ಸಾಹಿತ್ಯವಿದೆ.
ಈ ಚಿತ್ರದಲ್ಲಿ ಅರ್ಜುನ್ ಮತ್ತು ಯಶವಿಕಾ ನಿಷ್ಕಲಾ ಪ್ರಮುಖ ಪಾತ್ರದಲ್ಲಿದ್ದು, ಕಿಶೋರ್, ಅವಿನಾಶ್, ಶೋಭರಾಜ್, ಸುಚೇಂದ್ರ ಪ್ರಸಾದ್, ನೀನಾಸಂ ಅಶ್ವಥ್ ಉಳಿದ ತಾರಾಂಗಣದಲ್ಲಿದ್ದಾರೆ.
ದ್ರೋಣ ಕ್ರಿಯೇಶನ್ಸ್ ಬ್ಯಾನರ್ ನಲ್ಲಿ ಎಚ್ ಆರ್ ನಟರಾಜ್ ನಿರ್ಮಾಣ ಮಾಡಿದ್ದು, ಸಂಜೀವ್ ರೆಡ್ಡಿ ಸಂಕಲನ, ಆರ್ ಜನಾರ್ಧನ್ ಛಾಯಾಗ್ರಾಹಣ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಮತ್ತು ಧನಂಜಯ್ ನೃತ್ಯ ನಿರ್ದೇಶನವಿದೆ.