alex Certify ವಿದ್ಯಾರ್ಥಿನಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಶೇರ್ ಮಾಡಿದ ಶಿಕ್ಷಕ ಸೇರಿ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಶೇರ್ ಮಾಡಿದ ಶಿಕ್ಷಕ ಸೇರಿ ಇಬ್ಬರು ಅರೆಸ್ಟ್

ರಾಮನಗರ: ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಅಶ್ಲೀಲ ವಿಡಿಯೋ ಚಿತ್ತೀಕರಿಸಿಕೊಂಡು ಅದನ್ನು ಶೇರ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಕನಕಪುರ ನಗರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಅಂತೋಣಿ(51), ನಂದೀಶ್(32) ಬಂಧಿತ ಆರೋಪಿಗಳಾಗಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ವಿದ್ಯಾರ್ಥಿನಿಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ ಆರೋಪಿ ಶಿಕ್ಷಕ ಕುಟುಂಬದವರಿಗೆ ತೊಂದರೆ ನೀಡುವುದಾಗಿ ವಿದ್ಯಾರ್ಥಿನಿಯನ್ನು ಬೆದರಿಸಿದ್ದಾನೆ. ವಿಡಿಯೋ ಕರೆ ಮಾಡಿದ್ದ ಆರೋಪಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿಕೊಂಡಿದ್ದು, ಅದನ್ನು ಶೇರ್ ಮಾಡಿದ್ದಾನೆ ಎನ್ನಲಾಗಿದೆ. ಸಂತ್ರಸ್ತೆಯ ತಾಯಿ ಕನಕಪುರ ನಗರ ಠಾಣೆಗೆ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...