ಮದುವೆ ಮನೆಯಲ್ಲಿದ್ದವರಿಗೆಲ್ಲ ಬಿಗ್ ಶಾಕ್: ಕುಣಿಯುತ್ತಿದ್ದ ಯುವಕ ದಿಢೀರ್ ಸಾವು

ಹೈದರಾಬಾದ್: ಸಂಬಂಧಿಕರೊಬ್ಬರ ಮದುವೆಯ ಆರತಕ್ಷತೆಯಲ್ಲಿ 19 ವರ್ಷದ ಯುವಕನೊಬ್ಬ ನೃತ್ಯ ಮಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾನೆ.

ಹೈದರಾಬಾದ್‌ ನಿಂದ ಸುಮಾರು 200 ಕಿಮೀ ದೂರದಲ್ಲಿರುವ ನಿರ್ಮಲ್ ಜಿಲ್ಲೆಯ ಪಾರ್ಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಯುವಕ ಹೃದಯ ಸ್ತಂಭನಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾನೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಶನಿವಾರ ರಾತ್ರಿ ಮಹಾರಾಷ್ಟ್ರ ಮೂಲದ ಮುತ್ಯಂ ಮದುವೆಯೊಂದರಲ್ಲಿ ನೃತ್ಯ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಯುವಕ ಸಂಭ್ರಮಾಚರಣೆಯ ವೇಳೆ ಅತಿಥಿಗಳ ಸಮ್ಮುಖದಲ್ಲಿ ನೃತ್ಯ ಮಾಡುತ್ತಿದ್ದನು. ಜನಪ್ರಿಯ ಹಾಡುಗಳಿಗೆ ಹುರುಪಿನಿಂದ ಡ್ಯಾನ್ಸ್ ಮಾಡುತ್ತಿದ್ದಾಗ ವ್ಯಕ್ತಿ ನೆಲಕ್ಕೆ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಭೈಂಸಾ ಏರಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಬರುವಾಗಲೇ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಯುವಕನಿಗೆ ತೀವ್ರ ಹೃದಯ ಸ್ತಂಭನ ಉಂಟಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ನಾಲ್ಕು ದಿನಗಳಲ್ಲಿ ತೆಲಂಗಾಣದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಫೆಬ್ರವರಿ 22 ರಂದು ಹೈದರಾಬಾದ್‌ನ ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ 24 ವರ್ಷದ ಪೊಲೀಸ್ ಪೇದೆ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದರು.

https://twitter.com/zeeshan_zahed/status/1629751372194148354

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read