alex Certify ವಿಧಾನ ಪರಿಷತ್ ನೈರುತ್ಯ ಪದವೀಧರ – ಶಿಕ್ಷಕರ ಕ್ಷೇತ್ರದ ಚುನಾವಣೆ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನ ಪರಿಷತ್ ನೈರುತ್ಯ ಪದವೀಧರ – ಶಿಕ್ಷಕರ ಕ್ಷೇತ್ರದ ಚುನಾವಣೆ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಲ್ಲಿದೆ ಮಾಹಿತಿ

ವಿಧಾನ ಪರಿಷತ್ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಶೀಘ್ರದಲ್ಲೇ ನಡೆಯಲಿದ್ದು, ಇದಕ್ಕಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವ ಕುರಿತಂತೆ ಮಹತ್ವದ ಮಾಹಿತಿ ಇಲ್ಲಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳ್ಳಲು ಸೆಪ್ಟೆಂಬರ್ 30ರಂದು ಶಿವಮೊಗ್ಗ ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆ ಹೊರಡಿಸಲಿದ್ದು, ಅರ್ಹ ಪದವೀಧರರು ಮತ್ತು ಶಿಕ್ಷಕರು ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ನವೆಂಬರ್ 6ರ ಒಳಗಾಗಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಲು ಬಯಸುವವರು, 2023ರ ನವೆಂಬರ್ 1ಕ್ಕೆ ಅನ್ವಯವಾಗುವಂತೆ ಮೂರು ವರ್ಷಗಳ ಹಿಂದಿನ ದಿನಾಂಕಕ್ಕೆ ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದ ಪದವೀಧರರಾಗಿರಬೇಕು. ಅಲ್ಲದೆ ಕ್ಷೇತ್ರ ವ್ಯಾಪ್ತಿಯ ನಿವಾಸಿ ಆಗಿರಬೇಕಿದ್ದು, ಅರ್ಜಿ ನಮೂನೆ 18 ಭರ್ತಿ ಮಾಡಿ, ಇದರೊಂದಿಗೆ ತಮ್ಮ ಪದವಿ ಪ್ರಮಾಣ ಪತ್ರ, ಸರಕಾರಿ ಉದ್ಯೋಗಿಯಾಗಿದ್ದಲ್ಲಿ ನಿಗದಿಪಡಿಸಿದ ನಮೂನೆಯಲ್ಲಿ ದೃಢೀಕರಿಸಿದ ಮಾಹಿತಿ, ಮತದಾರರ ಗುರುತಿನ ಚೀಟಿ, ಆಧಾರ್, ಪಡಿತರ ಚೀಟಿ ಸೇರಿದಂತೆ ಯಾವುದೇ ಸಾಮಾನ್ಯ ನಿವಾಸಿ ದಾಖಲೆಗಳನ್ನು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ದೃಢೀಕರಿಸುವ ಮೂಲಕ ತಾಲೂಕು ಕಚೇರಿ, ಮಹಾನಗರ ಪಾಲಿಕೆ ಮತ್ತು ನಗರಸಭೆಗಳಲ್ಲಿ ತೆರೆಯಲಾಗಿರುವ ಕೌಂಟರ್ ಗಳಲ್ಲಿ ಸಲ್ಲಿಸಬಹುದಾಗಿದೆ.

ಇನ್ನು ಶಿಕ್ಷಕರ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಲು ಬಯಸುವ ಶಿಕ್ಷಕರು, 2023ರ ನವೆಂಬರ್ 1ಕ್ಕೆ ಅನ್ವಯವಾಗುವಂತೆ ಆರು ವರ್ಷಗಳ ಹಿಂದಿನ ದಿನಾಂಕಕ್ಕೆ ಅಂದರೆ 2017ರ ಅಕ್ಟೋಬರ್ ನಂತರದಲ್ಲಿ ಮೂರು ವರ್ಷಗಳ ಕಾಲ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ ಕುರಿತು ನಮೂನೆ 19ನ್ನು ಭರ್ತಿ ಮಾಡಿ ಅದರೊಂದಿಗೆ ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರ, ಆಧಾರ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಸೇರಿದಂತೆ ಯಾವುದೇ ಸಾಮಾನ್ಯ ನಿವಾಸಿ ದಾಖಲೆಗಳನ್ನು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ದೃಢೀಕರಿಸಿ ತಾಲೂಕು ಕಚೇರಿ, ಮಹಾನಗರ ಪಾಲಿಕೆ ಮತ್ತು ನಗರ ಸಭೆಗಳಲ್ಲಿ ತೆರೆಯಲಾದ ಕೌಂಟರ್ ಗಳಲ್ಲಿ ಸಲ್ಲಿಸುವ ಮೂಲಕ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...