ಬೆಂಗಳೂರು: ರೈತರ ಕೃಷಿ ಪಂಪ್ ಸೆಟ್ ಗಳಿಗೆ ದಿನಕ್ಕೆ 10 ಗಂಟೆ ವಿದ್ಯುತ್ ನೀಡಬೇಕು. ಇಲ್ಲದಿದ್ದರೆ ಪಂಪ್ ಸೆಟ್ ಹೊಂದಿರುವ 45 ಲಕ್ಷ ರೈತರ ಜೊತೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಗಾರಿಕೆಗಳಿಗೆ 24 ಗಂಟೆ ವಿದ್ಯುತ್ ಪೂರೈಕೆ ಮಾಡುವುದಾಗಿ ಹೇಳುವ ಸರ್ಕಾರ ರೈತರನ್ನು ಕಡೆಗಣಿಸಿ ಇಬ್ಬಗೆ ನೀತಿ ಅನುಸರಿಸುತ್ತಿದೆ ಎಂದು ದೂರಿದ್ದಾರೆ.
ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ನೀಡದ ಕಾರಣ ಬೆಳೆಗಳು ಒಣಗುತ್ತಿವೆ. ಕೂಡಲೇ 10 ಗಂಟೆ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.